ಬೆಂಗಳೂರು : ಇಂದು ಬೆಳಿಗ್ಗೆ ತಾನೇ ರಾಜ್ಯದ ಹಲವು ಕಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ಭ್ರಷ್ಟ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಈಗಾಗಲೇ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.
ಹೌದು ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಳಿಗ್ಗೆ 11 ಗಂಟೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದ್ದು, ಆಸ್ಪತ್ರೆಯಲ್ಲಿ ಹಲವು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಅವ್ಯವಹಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬಳಕೆ ದಾಳಿ ಮಾಡಿದ್ದಾರೆ. ರಾಮನಗರದಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿನ ಹಲವು ದಾಖಲೆ ಮತ್ತು ಕಡತಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.