ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ವಿಜಯಪುರ ಸೇರಿದಂತೆ 7 ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತಂಡ ಏಕಕಾಲಕ್ಕೆ 8 ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.