ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿ,ಗದಗ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು, ಬಳ್ಳಾರಿ, ಗದಗ ಬೆಟಗೇರಿ ಸೇರಿದಂತೆ ಹಲವರು ಮನೆಗಳು, ತೋಟ,ದ ಮನೆ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗದಗ ಬೆಟಗೇರಿ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಅವರ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ.
ಗದಗ -ಬೆಟಗೇರಿ ನಗರಸಭೆ ಇಂಜಿನಿಯರ್ ಕಚೇರಿ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬಳ್ಳಾರಿ ರಾಮಾಂಜನೇಯ ನಗರದಲ್ಲಿರುವ ತಾಲೂಕು ಬಿಸಿಎಂ ಅಧಿಕಾರಿ ಲೋಕೇಶ್ ನಿವಾಸದ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಲೋಕೇಶ್ ನಿವಾಸ ಅವರ ಸಂಬಂಧಿಕರು, ಸ್ನೇಹಿತರ ನಿವಾಸಗಳ ಮೇಲೆಯೂ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿನಡೆಸಿದ್ದು, ಕಡೂರು ಆಡಳಿತ ವೈದ್ಯಾಧಿಕಾರಿ ಉಮೇಶ್ ನಿವಾಸ, ಸ್ನೇಹಿತರು, ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಸಂಪಾದನೆ ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ. ಸದ್ಯ ಲೋಕೇಶ್ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಗಳು ದಾಖಲೆಗಲ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.