ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಕೂಡ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ, ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ಹಲವರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಬೇಕೆಂದು ಲೋಕಾಯುಕ್ತಕ್ಕೆ ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್ ದೂರು ನೀಡಿದ್ದಾರೆ.
ಹೌದು ಭ್ರಷ್ಟಾಚಾರ, ಅಧಿಕಾರ ದುಬರ್ಳಕೆ, ನಕಲಿ ದಾಖಲಾತಿ ಸೃಷ್ಟಿ ಹಿನ್ನೆಲೆಯಲ್ಲಿ ಮುಡಾದಿಂದ 14 ನಿವೇಶನಗಳನ್ನು ಪಡೆದು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಬಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿಬೇಕೆಂದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಡಾ ಹಗರಣದಲ್ಲಿ ಈಗಾಗಲೇ ರಾಜ್ಯಪಾಲರು ಆಗಸ್ಟ್ 17ರಂದು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಇದರಂತೆ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಈ ಕುರಿತು ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಹೈಕೋರ್ಟಿಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.