ಕೊಪ್ಪಳ : ಲಂಚದ ಹಣ ಸ್ವೀಕರಿಸಿದ ಬಳಿಕ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ಸಂದರ್ಭದಲ್ಲಿ ಲಂಚದ ಹಣವನ್ನು ಸ್ವೀಕರಿಸಿದ ಬಳಿಕ ಅಧಿಕಾರಿ ಒಬ್ಬ ನುಂಗಿದ್ದಾನೆ. ಈ ವೇಳೆ ಲೋಕಾಯುಕ್ತ ಪೊಲೀಸರು ಅಧಿಕಾರಿಗೆ ವಾಂತಿ ಮಾಡಿಸಿ ಹಣ ಕಕ್ಕಿಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಹೌದು ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಇಂದು ಸಂಜೆ ಕೊಪ್ಪಳ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ. ದಸ್ತಗಿರ್ ಅಲಿ, ಲೋಕಾ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದ್ದು, ಲಂಚದ ಹಣ ನುಂಗಿದ್ದನ್ನು ಲೋಕಾಯುಕ್ತ ಅಧಿಕಾರಿಗಳು ವಾಂತಿ ಮಾಡಿಸಿ ಕಕ್ಕಿಸಿರುವ ಘಟನೆ ನಡೆದಿದೆ. ಎನ್ಜಿಓಗೆ ಪ್ರಮಾಣ ಪತ್ರ ನೀಡಲು ಭೀಮನಗೌಡ ಅನ್ನೋರಿಗೆ ದಸ್ತಗಿರ್ ಅಲಿ ಎರಡು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಭೀಮನಗೌಡ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಇಂದು ದಸ್ತಗಿರಿ ಯನ್ನು ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರ ಬಲೆಗೆ ಬೀಳ್ತಿದ್ದಂತೆ ದಸ್ತಗಿರ್ ಅಲಿ ಹೈಡ್ರಾಮಾವೇ ಮಾಡಿದ್ದಾರೆ. ಲಂಚ ಪಡೆದಿದ್ದ ಎರಡು ಸಾವಿರ ರೂಪಾಯಿ ನೋಟನ್ನು ನುಂಗಿ ಸಾಕ್ಷಿನಾಶ ಮಾಡಲು ಯತ್ನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ನೀರು ಕುಡಿಸಿ ವಾಂತಿ ಮಾಡಿಸಿ, ಹಣ ಹೊರಗೆ ತೆಗೆಸಿದ್ದಾರೆ. ಸದ್ಯ ಲೋಕಾಯುಕ್ತ ಪೊಲೀಸರು ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.