ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಎಂ ವಿರುದ್ಧ ಲೋಕಾಯುಕ್ತ ತನಿಖೆ ಚುರುಕುಗೊಳಿಸಲಾಗಿದ್ದು, ಇಂದು ಸ್ಥಳ ಮಹಜರು ನಡೆಸಲಾಗುತ್ತಿದೆ.
ಮೈಸೂರಿನ ಕೆಸರೆ ಗ್ರಾಮದಲ್ಲಿರುವ ಸರ್ವೆ ನಂಬರ್ 464 ರಲ್ಲಿರುವ ಸಿಎಂ ಪತ್ನಿ ನಿವೇಶನಗಳಿರುವ ಜಾಗದಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರನ್ನು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.