ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹೌದು, ಇಂದು ಬೆಂಗಳೂರು ಜಿಬಿಎ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ಬಳಿ ಇರುವ ಟಿವಿಸಿಸಿ ಕಚೇರಿ ಸೇರಿದಂತೆ 7 ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಲೋಕಾಯುಕ್ತ ಇನ್ಸ್ ಪೆಕ್ಟರ್ ಗೋವಿಂದರಾಜು ನೇತೃತ್ವದ ಐದು ಸದಸ್ಯರ ತಂಡ ಈ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.
ಆರ್ ಆರ್ ನಗರ ವ್ಯಾಪ್ತಿಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ದೂರು ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.







