ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿ ಮೇಲೆ ಲೋಕಾಯುಕ್ತ ಧಿಡೀರ್ ದಾಳಿ ನಡೆಸಿದ್ದು, ಶಿವಮೊಗ್ಗ ನಗರ ಪಾಲಿಕೆ ಕಂದಾಯ ವಿಭಾಗ, ಆಡಳಿತ ವಿಭಾಗದ ಕಚೇರಿ, ನ್ಯಾಯಾಂಗದ ವಿಭಾಗ ಹಾಗು ಟಪಾಲು ವಿಭಾಗದ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ವೇಳೆ ಮಹಾನಗರ ಪಾಲಿಕೆ ಸಿಬ್ಬಂದಿಗಳು ತಬ್ಬಿಬಾಗಿದ್ದಾರೆ. ವಿಲೇವಾರಿಯಾಗದೆ ಇರುವ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಈ ವೇಳೆ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಿಗ್ಗೆ 11 ಗಂಟೆಯಾದರೂ ಅಧಿಕಾರಿಗಳು ಕಚೇರಿಗಳ ಬೀಗ ಹುಡುಕುತ್ತಿದ್ದರು. ಅಧಿಕಾರಿಗಳು ಬೀಗ ಹುಡುಕುತ್ತಿರುವುದು ನೋಡಿ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ನಿತ್ಯ ನಿರ್ವಹಿಸುವ ಕಾರ್ಯದ ಬಗ್ಗೆ ಮಾಹಿತಿ ಇಲ್ಲದೆ ಸಿಬ್ಬಂದಿಗಳು ಪರದಾಟ ನಡೆಸಿದ್ದಾರೆ.








