ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಅಷ್ಟೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ರೀಡ್ ಮಾಡಿದ್ದು ಇದೀಗ ಕೊಪ್ಪಳದಲ್ಲಿರುವ KRIDL ಮಾಜಿ ಹೊರಗುತ್ತಿಗೆ ನೌಕರನ ಮನೆಯ ಮೇಲೆ ಲೋಕಾಯುಕ್ತ ರೇಡ್ ಮಾಡಿದೆ. ಕೊಪ್ಪಳದ ಪ್ರಗತಿನಗರದಲ್ಲಿರುವ ಕಳಕಪ್ಪ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಿ ಇದೀಗ ಪರಿಶೀಲನೆ ನಡೆಸಲಾಗುತ್ತಿದೆ. ಕಳೆದ ವಾರ ಕಳೆ ಕಪ್ಪ ವಿರುದ್ಧ ಅಧಿಕಾರಿಗಳು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು 72 ಕೋಟಿ ಅಕ್ರಮಣಿಯಲ್ಲಿ ZM ಚಿಂಚೋಳಿಕರ ಹಾಗೂ ಹೊರಗುತ್ತಿಗೆ ನೌಕರ ಕಳಕಪ್ಪ ವಿರುದ್ಧ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದರು. ಈ ಹಿನ್ನಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.