ಬೆಂಗಳೂರು : ಸಾರ್ವಜನಿಕರಿಂದ ವ್ಯಾಪಕವಾದ ಅಂತಹ ದೂರುಗಳು ಬಂದಂತಹ ಹಿನ್ನೆಲೆಯಲ್ಲಿ ಇಂದು ಉಪಲೋಕಾಯುಕ್ತ ನ್ಯಾ.ಬಿ ವೀರಪ್ಪ ಹಾಗೂ ಎಸ್.ಪಿ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಯ ಮೇಲೆ ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೌದು ಬೆಂಗಳೂರಿನ ಎಂಬಿ ರಸ್ತೆಯ ಬೆಸ್ಕಾಂ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಹಾಗೂ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಕಡತ ಪರಿಶೀಲನೆ ಮಾಡುತ್ತಿದ್ದಾರೆ. ಬೆಸ್ಕಾಂ ಮತ್ತು ಜಲ ಮಂಡಳಿಯ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇದೀಗ ದಾಳಿ ಮಾಡಿದ್ದಾರೆ.