ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ರಾಜ್ಯಾದ್ಯಂತ ೫೬ ಕಡೆ ದಾಳಿ ನಡೆಸಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 56 ಕಡೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.