ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಧಾರವಾಡದ ಗಾಂಧಿನಗರದ ಬಂಡಾವಣೆಯಲ್ಲಿ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ನಿವಾಸದ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಮಂಡ್ಯದಲ್ಲೂ ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ದಾರೆ. ದಾಳಿ ವೇಳೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.