ಬೆಂಗಳೂರು : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕೂ ಮೀರಿದ ಅಸ್ತಿ, ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟಿಹೆಚ್ ಒ ಡಾ.ವೆಂಕಟೇಶ್ ಮನೆ ಮೇಲೆ ಲೋಕಾಯುಕ್ತ ಎಸ್.ಪಿ. ವಾಸುದೇವರಾಮ್, ಡಿವೈಎಸ್ ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಹಿರಿಯೂರು ಪಟ್ಟಣದ ಯರಗುಂಟೇಶ್ವರ ಬಡಾವಣೆಯ ಮನೆ, ಕ್ಲಿನಿಕ್ ಸೇರಿದಂತೆ ಹಲವಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಆದಾಯಕ್ಕೂ ಮೀರಿದ ಅಸ್ತಿ, ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಫಾರ್ಮ್ ಹೌಸ್ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.