ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಕೋಲಾರ ಡಿಸಿಸಿ ಬ್ಯಾಂಕ್ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮನೆ, ಕೋಲಾರ ಡಿಸಿಸಿ ಬ್ಯಾಂಕ್ ಕಚೇರಿ ಸೇರಿ ಹಲವಡೆ ಎಸ್.ಪಿ ಧನಂಜಯ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕೋಲಾರದ ತಾಲೂಕಿನ ಬ್ಯಾಲಹಳ್ಳಿಯಲ್ಲಿರುವ ಚಿಂತಾಮಣಿ ತಾಲೂಕು ವ್ಯವಸಾಯೋತ್ಪನ್ನ ಬ್ಯಾಂಕ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.