ಮೈಸೂರು : ಮೈಸೂರಿನ ಅರಮನೆ ಮಂಡಳಿ ಕಚೇರಿಯಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಇದೀಗ ಲೋಕಾಯುಕ್ತ ಅಧಿಕಾರಿಗಳು ಮೈಸೂರಿನ ಅರಮನೆ ಆಡಳಿತ ಕಚೇರಿಯ ಮೇಲೆ ದಾಳಿ ನಡೆಸಿ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ವಶ ಪಡೆಯಲಾಗಿದೆ
ಹೌದು ಮೈಸೂರಿನ ಅರಮನೆ ಮಂಡಳಿ ಕಚೇರಿಯ ಮೇಲೆ ಇದೀಗ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು, ಈ ವೇಳೆ ಲೆಕ್ಕಕ್ಕೆ ಸಿಗದ 4.10 ಲಕ್ಷ ರೂಪಾಯಿ ವಶಕ್ಕೆ ಪಡೆದ ಲೋಕಾಯುಕ್ತ. ಪ್ರವೇಶ ದ್ವಾರ ಪಾರ್ಕಿಂಗ್ ಲಾಟ್ ನಲ್ಲಿ ಲೆಕ್ಕಕ್ಕೆ ಸಿಗದ ಹಣ ಪತ್ತೆಯಾಗಿದೆ. ಪ್ರವೇಶ ಟಿಕೇಟ್ ಪಾರ್ಕಿಂಗ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂಬ ದೂರು ಬಂದಿದೆ.
ಈ ಹಿನ್ನೆಲೆಯಲ್ಲಿ ದೂರನ್ನು ಆಧರಿಸಿದ ಲೋಕಾಯುಕ್ತ ಎಸ್ ಪಿ ಸಚಿತ್ ನೇತೃತ್ವದಲ್ಲಿ ಇದೀಗ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಮೈಸೂರು ಚಾಮರಾಜನಗರ, ಮಂಡ್ಯ, ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗಿಯಾಗಿದ್ದರು.