ಬೆಂಗಳೂರು : ಬೆಂಗಳೂರು, ಚಿಕ್ಕಮಗಳೂರು ಹಾಸನ್ ಹಾಗೂ ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಮಂಡ್ಯದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಇ.ಇ ಆಗಿರುವ ಅಧಿಕಾರಿ ಹರ್ಷ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದೆ.
ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳ ಮೇಲು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ ನಾಗಮಂಗಲದಲ್ಲಿರುವ ಫಾರ್ಮ ಹೌಸ್ ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಚಿಕ್ಕಮಗಳೂರು ಹಾಸನದಲ್ಲೂ ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲಿ ನೆಡೆಸುತ್ತಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್ ಅವರ ನಿವಾಸ ಹಾಗೂ ಕಚೇರಿಯ ಮೇಲು ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ ಜಗನ್ನಾಥ ಸಹೋದರ ಕಿರಣ್ ನಿವಾಸ ಮೇಲು ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.ಸಹೋದರ ಕಿರಣ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದಾರೆ ಎಂದು ಹೇಳಲಗುತ್ತಿದೆ.ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.