ಚಿತ್ರದುರ್ಗ : ಮುಖ್ಯಾಧಿಕಾರಿಯೊಬ್ಬ 25,000 ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ನಡೆದಿದೆ ಹೊಸದುರ್ಗದ ಮುಖ್ಯಾಧಿಕಾರಿ ತಿಮ್ಮರಾಜು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾರೆ.
ಇ ಖಾತೆ ಮಾಡಿಕೊಡಲು 50 ಸಾವಿರ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ತಿಮ್ಮರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪುರಸಭೆ ಸದಸ್ಯ ಎನ್ ಶಾಂತಪ್ಪ ಬಳಿ 25,000 ಲಂಚ ಸ್ವೀಕರಿಸುವಾಗ ತಿಮ್ಮರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ವಾಸುದೇವ ರಾಮ್ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿತ್ತು.