ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೆ ಸಿಲುಕಿ ನ್ಯಾಯಾಂಗ ಬಂಧನದಲ್ಲಿರುವಂತ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ವಿನಯ್ ಅವರ ಪೊಲೀಸ್ ಕಸ್ಟಡಿ ಇಂದು ಕೊನೆಗೊಂಡಿತ್ತು. ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇಂತಹ ಇಬ್ಬರು ಮಾಜಿ ಬಿಗ್ ಬಾಸ್ ಸ್ಪರ್ಧಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶಿಸಿದೆ.
ಮಚ್ಚು ಹಿಡಿದು ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ರೀಲ್ಸ್ ಮಾಡಿದ್ದರು. ಈ ಸಂಬಂಧ ಇಬ್ಬರ ವಿರುದ್ಧ ಕೇಸ್ ದಾಖಲಿಸಿದ್ದಂತ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು.
ಇಂದು ರಜತ್ ಹಾಗೂ ವಿನಯ್ ಪೊಲೀಸರ ವಶದಲ್ಲಿದ್ದಂತ ಅವಧಿ ಮುಕ್ತಾಯಗೊಂಡಿತ್ತು. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯಕ್ಕೆ ಪೊಲೀಸರು ಇಬ್ಬರನ್ನು ಹಾಜರುಪಡಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದಂತ ಕೋರ್ಟ್, ಏ ವಿನಯ್ ಹಾಗೂ ರಜತ್ ಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶಿಸಿದೆ.