ಬೆಂಗಳೂರು : ರೀಲ್ಸ್ ಗಾಗಿ ಲಾಂಗ್ ಝಳಪಿಸಿದ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಹಾಗೂ ರಜತ್ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೌದು, ಬಿಗ್ ಬಾಸ್ 10ರ ಸ್ಪರ್ಧಿ ವಿನಯ್ ಗೌಡ ಹಾಗೂ ಬಿಗ್ ಬಾಸ್ 11ರ ಸ್ಪರ್ಧಿ ರಜತ್ ವಿರುದ್ಧ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಎಫ್‌ಐಆರ್ ಅನ್ನು ದಾಖಲು ಮಾಡಿಕೊಳ್ಳಲಾಗಿದೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ಇಬ್ಬರೂ ರೀಲ್ಸ್ ಮಾಡಿದ್ದರು. ಅದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈಗ ಬಿಗ್ ಬಾಸ್ ಸ್ಪರ್ಧಿಗಳು ಹೀಗೆ ರೀಲ್ಸ್ ಮಾಡುವುದಕ್ಕೆ ಹೋಗಿ ಪೇಚಿಗೆ ಸಿಕ್ಕಿಕೊಂಡಿದ್ದಾರೆ. ವಿನಯ್ ಗೌಡ ಹಾಗೂ ರಜತ್ ಇಬ್ಬರೂ ಈಗ ಸಂಕಷ್ಟಕ್ಕೆ ಸಿಲುಕಿದ್ದು, ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.