ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ. ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದ್ದು, ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ ಇದೆ.
ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.
ಬೆಂಗಳೂರಲ್ಲಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಶಾಸಕ ಬೈರತಿ ಬಸವ ರಾಜು ಅವರ ಪತ್ತೆಗಾಗಿ ಸಿಐಡಿ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಹೋಗಿದ್ದ ಶಾಸಕ ಬೈರತಿ ಬಸವರಾಜು ಅವರು ಅಲ್ಲಿಂದಲೇ ಮಹಾರಾಷ್ಟ್ರ ಅಥವಾ ಗೋವಾ ದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಿಐಡಿಯ 3 ತಂಡಗಳು ಅವರಿಗಾಗಿ 2-3 ರಾಜ್ಯಗಳಲ್ಲಿ ಶೋಧ ನಡೆಸುತ್ತಿವೆ.
ಈ ಮಧ್ಯೆ ಅವರು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ವಿಭಾಗದ ಅಧಿಕಾರಿಗಳಿಗೆ ಲುಕ್ ಔಟ್ ನೋಟಿಸ್ ನೀಡಲು ಮುಂದಾಗಿದ್ದಾರೆ. ಜತೆಗೆ ರೈಲು ನಿಲ್ದಾಣಗಳಿಗೂ ಮಾಹಿತಿ ನೀಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಸವರಾಜು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ.








