ಚಾಮರಾಜನಗರ : ಮನೆಯಲ್ಲಿ ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೇಣು ಬಿಗಿದುಕೊಂಡು ಪ್ರೇಮಿಗಳು ಇಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೊನ್ನಚಿ ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲೆ ನದಿಯ (19) ಹಾಗು ನಾಗೇಂದ್ರ (21) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಾಲರ್ ಗ್ರಾಮದ ನದಿಯಾಳನ್ನು ನಾಗೇಂದ್ರ ಪ್ರೀತಿಸುತ್ತಿದ್ದ. 3 ದಿನದ ಹಿಂದೆ ನಾಗೇಂದ್ರ ಜೊತೆ ನದಿಯಾ ಪೊನ್ನಚ್ಚಿಗೆ ತೆರಳಿದ್ದಳು. ನಾಗೇಂದ್ರ ಆಕೆಯನ್ನು ತಾತನ ಮನೆಗೆ ಕರೆದುಕೊಂಡು ಹೋಗಿದ್ದ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವನಿಸಲಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








