ಗದಗ : ಗದಗ ಜಿಲ್ಲೆಯಲ್ಲಿ ಘೋರ ಘಟನೆ ಒಂದು ನಡೆದಿದ್ದು, ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ದುರಾದೃಷ್ಟವಶಾತ್ ಬಾಲಕಿಯೊಬ್ಬಳು ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿದ್ದು ಯುವಕನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಈ ಒಂದು ಘಟನೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ನಡೆದಿದೆ.
ಗಜೇಂದ್ರಗಡದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು ಚಿಕಿತ್ಸೆ ಫಲಿಸದೆ ಅಪ್ರಾಪ್ತೆ ಸಾವನಪ್ಪಿದ್ದಾಳೆ. ಯುವಕನ ಸ್ಥಿತಿ ಗಂಭೀರವಾಗಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ಪ್ರೇಮಿಗಳು ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಅಪ್ರಾಪ್ತ ಸಾವನಪ್ಪಿದ್ದಾಳೆ. 25 ವರ್ಷದ ಯುವಕನಿಗೆ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.