ವಿಜಯನಗರ : ಪಿಯುಸಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.
ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯಲ್ಲಿ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆಯ ಜಿಟ್ಟಿನಕಟ್ಟೆ ಗ್ರಾಮದ ಮದನಸ್ವಾಮಿ ಹಾಗೂ ಬಂಡ್ರಿ ಗ್ರಾಮದ ದೀಪಿಕಾ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ನಂತರ ಇಬ್ಬರು ನಾಪತ್ತೆಯಾಗಿದ್ದರು. ಇದೀಗ ಶವವಾಗಿ ಪತ್ತೆಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.