ಬೆಂಗಳೂರು : ಬೆಂಗಳೂರಿನಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಿಟಿಎಂ ಲೇಔಟ್ ನ 2ನೇ ಹಂತದ ಮನೆಯಲ್ಲಿ ಎಲ್ ಪಿಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಯುವತಿಯರಿಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಮನೆಯಲ್ಲಿದ್ದ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.