ಶಿವಮೊಗ್ಗ : ಮದುವೆ ನಿಶ್ಚಯವಾಗಿದ್ದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಕಟ್ಲೆ ಹಕ್ಲು ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಯುವತಿ ನೇಣಿಗೆ ಕೊರಳೋಡ್ಡಿದ್ದಾಳೆ. ಮೃತ ಯುವತಿ ಚೈತ್ರಾ (26) ಎಂದು ಹೇಳಲಾಗುತ್ತಿದ್ದು, ಫೆಬ್ರುವಾರಿ 4 ರಂದು ಎಂಕಾಂ ಪದವಿಧರೆ ಹಸೆಮಣೆ ಇರಬೇಕಾಗಿತ್ತು. ಆದರೆ ಯಾವ ಕಾರಣಕ್ಕೆ ಯುವತಿ ನೇಣಿಗೆ ಶರಣಾಗಿದ್ದಾಳೆ ಎಂಬುದು ಗೊತ್ತಿಲ್ಲ. ಇದೀಗ ಮರಣೋತ್ತರ ಪರೀಕ್ಷೆಗಾಗಿ ಚೈತ್ರಾಶ್ವವನ್ನು ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಕೇವಲ 13 ದಿನಗಳಲ್ಲಿ ಯುವತಿ ಚೈತ್ರ ಮದುವೆ ನಿಶ್ಚಯವಾಗಿದ್ದ ಯುವತಿ ಈ ರೀತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಪ್ರಮುಖವಾದಂಥ ಕಾರಣ ಇದುವರೆಗೂ ತಿಳಿದು ಬಂದಿಲ್ಲ. ಸ್ಥಳಕ್ಕೆ ತೀರ್ಥಹಳ್ಳಿ ತಾಲೂಕಿನ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.