ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಿಂದೂ ಸಂಘಟನೆ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮೆರವಣಿಗೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಮಸೀದಿ ಮೇಲೆ ಮತ್ತೆ ಕಲ್ಲು ತೂರಾಟ ನಡೆಸಿದ್ದಾರೆ. ಇದೀಗ ಪ್ರತಿಭಟನಾ ಸ್ಥಳಕ್ಕೆ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ಕೊಟ್ಟಿದ್ದು, ಮತ್ತಷ್ಟು ಕಿಚ್ಚು ಹೊತ್ತಿಸಿದ್ದಾರೆ.
ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಇದಕ್ಕೆ ಹಿಂದೂ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಇದೀಗ ಪ್ರತಿಭಟನೆಯಲ್ಲಿ ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಹ ಭಾಗಿಯಾಗಿದ್ದಾರೆ. ಹೆದ್ದಾರಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸುತ್ತಿದ್ದು, ಕಲ್ಲು ತೂರಾಟ ಖಂಡಿಸಿ ಪ್ರತಾಪ್ ಸಿಂಹ ಆಕ್ರೋಶ ಹೊರ ಹಾಕಿದ್ದಾರೆ.
ಅಲ್ಲದೇ ಇದಕ್ಕೂ ಮೊದಲು ಮೆರವಣಿಗೆ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಯಿತು. ಲಾಠಿ ಹಿಡಿದು ಯುವಕರನ್ನ ಚದುರಿಸಿದ ಪೊಲೀಸರು. ಪ್ರತಿಭಟನೆ ವೇಳೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಿಡಿಗೇಡಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮಸೀದಿ ಬಳಿ ಹಿಂದೂ ಕಾರ್ಯಕರ್ತರು ಕರ್ಪೂರ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.