ಪ್ರಯಾಗ್ ರಾಜ್ : ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಭೀಕರ ಕಾಲ್ತುಳಿತದ ಬೆನ್ನಲ್ಲೇ ಸಂಚಾರ ದಟ್ಟಣೆ ಕಡಿಮೆ ಮಾಡಲು ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, 50 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರವನ್ನು ಬಂದ್ ಮಾಡಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ವದಂತಿಗಳಿಗೆ ಗಮನ ಕೊಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದ್ದಾರೆ. ಜನರು ಗಂಗಾ ಮಾತೆಯ ಹತ್ತಿರದ ಘಾಟ್ನಲ್ಲಿ ಸ್ನಾನ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ನಾನ ಮಾಡಲು ಅನೇಕ ಘಾಟ್ಗಳನ್ನು ನಿರ್ಮಿಸಲಾಗಿದೆ. ಜನರು ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಮತ್ತು ವ್ಯವಸ್ಥೆಗಳನ್ನು ಮಾಡುವಲ್ಲಿ ಸಹಕರಿಸಬೇಕು. ಅಲ್ಲದೆ ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ತಿಳಿಸಿದ್ದಾರೆ.