ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಕೊಲೆ ನಡೆದಿದ್ದು, ಮಹಾರಾಷ್ಟ್ರದ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹಣಕೊಣ ಗ್ರಾಮದಲ್ಲಿ ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ್ ನಾಯ್ಕ್ (52) ಅವರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ವೇಳೆ ಪತ್ನಿಯ ಮೇಲೆ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ಪತ್ನಿಯನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.