ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುವ ಸಂದರ್ಭದಲ್ಲಿ, ಮಹೇಶ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಬಂದೂಕು ಹಾಗೂ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇದೀಗ ಮಹೇಶ್ ಶೆಟ್ಟಿ ತಿಮರೊಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.
ಹೌದು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಐ ಟಿ ಎಸ್ಪಿ ಸೈಮನ್ ಅವರ ದೂರು ಆಧರಿಸಿ ಮಹೇಶ ಶೆಟ್ಟಿ ತಿಮರೊಡಿ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆ 25(1), 25(1-A), 24(1-B), (A) ರಡಿ ಕೇಸ್ ದಾಖಲಾಗಿದೆ.
ಮಹೇಶ ಶೆಟ್ಟಿ ತಿಮ್ಮರೊಡಿ ಮನೆಯಲ್ಲಿ ಬಂದೂಕು ಸೇರಿದಂತೆ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಆಗಸ್ಟ್ 26ರಂದು ತಿಮರೋಡಿ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಶೋಧ ನೆಡೆಸಿದ್ದರು. ಈ ವೇಳೆ 2ತಲ್ವಾರ್, ಬಂದೂಕು ಸೇರಿದಂತೆ ಹಲವು ವಸ್ತುಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ಎಸ್‌ಪಿ ಸೈಮನ್ ಅವರ ದೂರು ಆಧರಿಸಿ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ.