ಬೆಳಗಾವಿ : ಬೆಳಗಾವಿಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ಇರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಆರು ಜನ ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ವರದಿಯಾಗಿದೆ.
ಮರಕುಂಬಿಬಳ್ಳಿಯ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಗೆ ಬೆಳಗಾವಿ ಎಸ್ ಪಿ ಕೆ ರಾಮರಾಜನ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








