ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.15 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಆಂಟಿ ನಾರ್ಕೊಟಿಕ್ ಈ ಒಂದು ಕಾರ್ಯಾಚರಣೆ ನಡೆಸಿದ್ದು, ಮಾರತ್ತಹಳ್ಳಿ ಬಾಡಿಗೆ ಮನೆಯಲ್ಲಿ ವಿದೇಶಿ ಪ್ರಜೆಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತನಿಂದ 5.15 ಕೋಟಿ ಮೌಲ್ಯದ ಎರಡುವರೆ ಕೆಜಿ MDMA ಹಾಗು 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಿಂದೆ ಈ ಆರೋಪಿ ಕಾಡುಗೋಡಿ, ಹೆಣ್ಣೂರು ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಬಂಧನವಾಗಿ ಬಿಡುಗಡೆಯಾಗಿದ್ದ. ಹೊರಬಂದ ಬಳಿಕ ಮತ್ತೆ ಅದೇ ಹಳೆಯ ಜಾಳಿ ಮುಂದುವರೆಸಿದ ವಶಕ್ಕೆ ಪಡೆದಿದ್ದಾರೆ.








