ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ಒಟ್ಟು 8 ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ 9 ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸುತ್ತಿದ್ದು ಆರೋಪಿಗಳನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇರಿಸಲಾಗಿದೆ.