ಮಂಡ್ಯ : ಮಂಡ್ಯದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೊಮ್ಮೂರು ಅಗ್ರಹಾರ ಗ್ರಾಮದ ಬಳಿ 12 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮುರು ಅಗ್ರಹಾರದಲ್ಲಿ ಗಾಂಜಾ ಸಾಗಿಸುತ್ತಿದ್ದ ಇರ್ಶಾದ್ ಮತ್ತು ಅಕ್ಬರ್ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಬಕಾರಿ ಡಿಸಿ ನಾಗಶಯ ನೇತೃತ್ವದಲ್ಲಿ ದಾಳಿ ನಡೆಸಿ 12 ಕೆಜಿ ಗಾಂಚಾವನ್ನು ಜಪ್ತಿ ಮಾಡಿಕೊಂಡಿದ್ದಾರೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ಆರೋಪಿಗಳು ಗಾಜಾ ಸಾಗಿಸುತ್ತಿದ್ದರು ಎನ್ನಲಾಗಿದೆ.