ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ರಾಜ್ಯ ಸರ್ಕಾರ ಇಬ್ಬರು ಐಎಎಸ್, ಮೂವರು ಐಎಫ್ ಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ಟಿ.ಹೆಚ್.ಎಂ.ಕುಮಾರ್ ಅವರನ್ನು ಸಹಕಾರ ಸೊಸೈಟಿ ರಿಜಿಸ್ಟ್ರಾರ್ ಆಗಿ ಹಾಗೂ ಡಾ.ರಾಜೇಂದ್ರ ಅವರನ್ನು ಸಣ್ಣ ಕೈಗಾರಿಕಾ ನಿಗಮ ಎಂಡಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಇನ್ನು ಐಎಫ್ ಎಸ್ ಅಧಿಕಾರಿ ಬಿ.ಪಿ. ರವಿ, ರುಥ್ರೆನ್ ಪಿ ಹಾಗೂ ಐಎಸ್ ಎಫ್ ಅಧಿಕಾರಿ ಅಬ್ದುಲ್ ಅಜೀಜ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.