ಬೆಂಗಳೂರು : ರಾಜ್ಯ ಸರ್ಕಾರಿ ಮಹಿಳಾ ನೌಕರರ ಋತುಚಕ್ರ ರಜೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ಮಹಿಳಾ ನೌಕರರ ಋತುಚಕ್ರ ರಜೆಗೆ ಸರ್ಕಾರಿ ಪುರುಷ ನೌಕರರು ವಿರೋಧ ವ್ಯಕ್ತಪಡಿಸಿದ್ದು, ರಾಜ್ಯ ಶಿಷ್ಟಾಚಾರ ವಿಭಾಗದ ನೌಕರರು ಆರ್ಥಿಕ ಇಲಾಖೆ ಪ್ರಧಾನಿ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದ್ದಾರೆ.
ರಾಜ್ಯ ಸರ್ಕಾರಿ ಮಹಿಳಾ ನೌಕರರ ಋತುಚಕ್ರ ರಜೆಗೆ ವಿರೋಧಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೂ ಪತ್ರ ರವಾನಿಸಿದ್ದಾರೆ. ಮಹಿಳೆಯರಿಗೆ ನೀಡುತ್ತಿರುವ ಋತುಚಕ್ರ ರಜೆ ಸರಿಯಲ್ಲ. ಋತುಚಕ್ರದ ರಜೆಯನ್ನು ಪುನರ್ ಪರಿಶೀಲಿಸುವಂತೆ ಮನವಿ ಮಾಡಲಾಗಿದೆ.








