ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಹಂಗಾಮದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭೇಟಿಯಾಗಿದ್ದಾರೆ.
ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಮಲ್ಲಿಕಾರ್ಜುನ್ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಹನಿಟ್ರ್ಯಾಪ್ ಪ್ರಕರಣದಲ್ಲಿ ನಮ್ಮ ಪಕ್ಷದವರು, ವಿರೋಧ ಪಕ್ಷದವರು ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಸದನದಲ್ಲಿ ಸಚಿವರೇ ಹೇಳಿಕೆ ನೀಡಿದ ಮೇಲೆ ಸರ್ಕಾರ ಸುಮ್ಮನಿರುವುದಿಲ್ಲ. ಈ ಪ್ರಕರಣ ಕುರಿತು ತನಿಖೆ ನಡೆಸುತ್ತೇವೆ. ವಿರೋಧ ಪಕ್ಷದವರು ನ್ಯಾಯಾಂಗ ತನಿಖೆಯ ಸಲಹೆ ನೀಡಿದ್ದಾರೆ. ಈ ಎಲ್ಲದರ ಕುರಿತು ಗೃಹ ಸಚಿವರು ಸೇರಿದಂತೆ ಹಿರಿಯ ಸಚಿವರೊಂದಿಗೆ ಚರ್ಚಿಸಿ, ಯಾವ ರೀತಿ ತನಿಖೆ ನಡೆಸಬೇಕು ಎಂಬುದನ್ನು ನಿರ್ಧರಿಸುತ್ತೇವೆ. ಎಲ್ಲ ಶಾಸಕರು, ಸಚಿವರಿಗೆ ರಕ್ಷಣೆ ಕೊಡುವುದು ನಮ್ಮ ಕರ್ತವ್ಯ. ಪ್ರಕರಣದ ತನಿಖೆಯಾದರೆ ಎಲ್ಲವೂ ಬಹಿರಂಗವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು.