ಬೆಳಗಾವಿ : 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆದಿತ್ತು. . ಈ ಒಂದು ಐತಿಹಾಸಿಕ ದಿನದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧಿ ಭಾರತ ಸಮಾವೇಶ ಆಯೋಜನೆ ಮಾಡಲಾಗಿತ್ತು. ಇದೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಹಾತ್ಮ ಗಾಂಧೀಜಿಯವರ ಬೃಹತ್ ಪುತ್ಥಳಿಯನ್ನು ಚರಕ ತಿರುಗಿಸುವುದರ ಮೂಲಕ ಅನಾವರಣಗೊಳಿಸಿದರು.
ಈ ಒಂದು ಸಮಾವೇಶಕ್ಕೆ ಈಗಾಗಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಸಂಸದೆ ಪ್ರಿಯಾಂಕಾ ಗಾಂಧಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೆವಾಲಾ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು ಶಾಸಕರುಗಳು ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರು ಭಾಗಿಯಾಗಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿ ಡ್ಯೂಟಿ ಖಾದರ್ ಸಚಿವರಾದಂತಹ HK ಪಾಟೀಲ್, ಪ್ರಿಯಾಂಕ್ ಖರ್ಗೆ, ಚೆಲುವರಾಯಸ್ವಾಮಿ, ಸಿರಿಗಂತೆ ಇನ್ನು ಅನೇಕ ಕಾಂಗ್ರೆಸ್ ನಾಯಕರು ಈ ಒಂದು ಸಮಾವೇಶದಲ್ಲಿ ಭಾಗಿಯಾಗಿದ್ದರು