ನವದೆಹಲಿ: ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸಂದೇಶ ಬರೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ದೆಹಲಿ ಮೆಟ್ರೋ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ರಾಜೌರಿ ಪೊಲೀಸ್ ಠಾಣೆ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಆರೋಪಿ ಅಂಕಿತ್ ಗೋಯೆಲ್ ಎಂದು ಗುರುತಿಸಲಾಗಿದೆ. ಈತ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೊಲೆ ಬೆದರಿಕೆ ಪತ್ರ ಬರೆದಿದ್ದ. ಮೂಲಗಳ ಪ್ರಕಾರ, ಆರೋಪಿ ಬರೇಲಿ ನಿವಾಸಿಯಾಗಿದ್ದು, ಪ್ರತಿಷ್ಠಿತ ಬ್ಯಾಂಕಿನಲ್ಲಿ ಕೆಲಸಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.