ಮಂಗಳೂರು : ಮಂಗಳೂರು ಸೆನ್ ಕ್ರೈಂ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ 500 ಕ್ಕೂ ಹೆಚ್ಚು ಸಿಮ್ ಕಾರ್ಡ್ ಗಳನ್ನು ಪೂರೈಸುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ.
ಆರೋಪಿ ಕಣಾತಲ ವಾಸುದೇವ ರೆಡ್ಡಿ ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ತಿಳಿದುಬಂದಿದ್ದು, ಕೂಡಲೇ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.