ಬೆಂಗಳೂರು : ಇತ್ತೀಚೆಗೆ ಹೆಂಡತಿಯರ ಕಾಟಕ್ಕೆ ಅದೆಷ್ಟೋ ಗಂಡಂದಿರು ಕಿರುಕುಳ ತಾಳದೆ ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಬೆಂಗಳೂರಿನ ರಾಜಭವನದ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆತಿಸಿರುವ ಘಟನೆ ಇದೀಗ ವರದಿಯಾಗಿದೆ.
ಹೌದು ಪೆಟ್ರೋಲ್ ಸುರವಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಲ್ಲದೇ ಈ ಕುರಿತು ಪೊಲೀಸರು ಸ್ವೀಕರಿಸದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ. ಕೂಡಲ್ಸ್ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ತಕ್ಷಣ ಕರೆದೊಯ್ಯದಿದ್ದಾರೆ.