ಗದಗ: ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆಕೋರರು ಅಟ್ಟಹಾಸ ಮೆರೆದಿದ್ದು, ಗದಗದಲ್ಲಿ ಸಾಲ ಪಡೆದಿದ್ದ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ವ್ಯಕ್ತಿಯನ್ನು ರೂಮ್ ನಲ್ಲಿ ಕೂಡಿಹಾಕಿ ಇಡೀ ರಾತ್ರಿ ಹಲ್ಲೆ ನಡೆಸಿದ್ದಾರೆ. ಗದಗ -ಬೆಟಗೇರಿ ಅವಳಿ ನಗರದಲ್ಲಿ ಅಮಾನುಷ ಕೃತ್ಯ ನಡೆದಿದೆ. ಸಾಲ ಪಡೆದ ಗದಗ ನಗರದ ಡಿಸಿ ಮಿಲ್ ನಿವಾಸಿ ದಶರಥ ಬಳ್ಳಾರಿ ಅವರ ಮೇಲೆ ಹಲ್ಲೆ ನಡೆಸಲಾಗಿದೆ
ರೌಡಿಶೀಟರ್ ಡಿಸ್ಕವರಿ ಮಂಜು, ಮಂಜುನಾಥ ಹಂಸನೂರು, ಮಹೇಶ ಹಂಸನೂರು, ಹನುಮಂತ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.