ಬೆಂಗಳೂರು : ನಡು ರಸ್ತೆಯಲ್ಲಿ ವ್ಯಕ್ತಿಯನ್ನು ಭೀಕರವಾಗಿ ಕೊಂದು ಆರೋಪಿಯೊಬ್ಬ ಪೊಲೀಸರಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಟಿಪ್ಪು ಬಡಾವಣೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಜಬೀರ್ ಪಾಷಾ (26) ಎನ್ನುವ ವ್ಯಕ್ತಿಯನ್ನು ಮುಕ್ತಿಯರ್ ಪಾಷಾ ಎನ್ನುವ ವ್ಯಕ್ತಿ ಕೊಲೆ ಮಾಡಿದ್ದಾನ. ಕೊಲೆ ಮಾಡಿದ ನಂತರ ಚಿಂತಾಮಣಿ ಠಾಣೆಗೆ ಬಂದು ಪೊಲೀಸರಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.