ಮಂಡ್ಯ : ಗೂಡ್ಸ್ ಆಟೋ ಓವರ್ ಟೆಕ್ ವಿಚಾರಕ್ಕೆ ವ್ಯಕ್ತಿಯ ಬರಬರಹತೆಯಾಗಿದೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಚ್ಚಿಕೊಪ್ಪಲಿನಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಚಾಕು ಇರಿದು ಎಸ್ಕೇಪ್ ಆಗುತ್ತಿದ್ದವರನ್ನು ಗ್ರಾಮಸ್ಥರು ಅಟ್ಟಾಡಿಸಿ ಹಿಡಿದು ಧರ್ಮದೇಟು ನೀಡಿದ್ದಾರೆ.
ಚಾಕು ಇರಿದು ಐವರ ಯುವಕರ ಗುಂಪು ಪರಾರಿಯಾಗುತ್ತಿತ್ತು. ಕೂಡಲೇ ಕೊಲೆ ಆರೋಪಿಗಳನ್ನು ಗ್ರಾಮಸ್ಥರೇ ಅಟ್ಟಾಡಿಸಿಕೊಂಡು ಹೋಗಿ ಹಿಡಿದಿದ್ದಾರೆ. ಬಳಿಕ ಅವರೇ ಧರ್ಮದೇಟು ಕೊಟ್ಟಿದ್ದಾರೆ. ಚಾಕು ಇರಿತಕ್ಕೆ ಒಳಗಾದಂತ ಕುಮಾರ್ ಚಿಕಿತ್ಸೆ ಫಲಿಸದೇ ಇದೀಗ ಸಾವನ್ನಪ್ಪಿದ್ದಾರೆ.
ಕೊಲೆ ಕುರಿತು ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಕೊಲೆ ಆರೋಪಿಗಳನ್ನು ನಾಗಮಂಗಲ ಗ್ರಾಮಂತರ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.