ಶಿವಮೊಗ್ಗ : ಇಂದು ಶಿವಮೊಗ್ಗದಲ್ಲಿ ಬೆಳಂ ಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವಾಕಿಂಗ್ ಗೆ ಎಂದು ತೆರಳಿದ ವ್ಯಕ್ತಿಯನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆ ಹೊನ್ನೂರಿನಲ್ಲಿ ನಡೆದಿದೆ.
ಹೊಳೆಹೊನ್ನೂರಿನ ಹೊಸಕೊಪ್ಪ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ರಸ್ತೆಯಲ್ಲಿ ಕೊಲೆಯಾಗಿದೆ. ಹೇಮಣ್ಣ (68) ಎನ್ನುವವರು ಭೀಕರವಾಗಿ ಕೊಲೆಯಾದವರು ಎಂದು ತಿಳಿದುಬಂದಿದೆ.
ಹೇಮಣ್ಣ ಮೇಲೆ ಈ ಹಿಂದೆಯು ದಾಳಿಯಾಗಿತ್ತು. ಆಗ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದರು. ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.