ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 5ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಆರೋಪಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ನಡೆದಿದೆ.
ಹೌದು ರಾಮದುರ್ಗ ತಾಲೂಕಿನ ಕೊಣ್ಣೂರು ಗ್ರಾಮದ ಈರಪ್ಪ ಕರಡಿ ಎಂಬಾತನೇ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೊಬೈಲ್ ಆಸೆ ತೋರಿಸಿ 5 ವರ್ಷದ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚಾರ ಹೆಸರುವ ವಿಚಾರ ಬಾಲಕಿಯ ಮನೆಯಲ್ಲಿ ಗೊತ್ತಾದ ಬಳಿಕ ಭಾವ ಪ್ರಜ್ಞೆಯಿಂದ ಆರೋಪಿ ಈರಪ್ಪ ಕಡಾಡಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.