ಬೆಂಗಳೂರು : ಬೆಂಗಳೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಲಿಸುವ ರೈಲಿಗೆ ಅಡ್ಡಮಲಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡವನನ್ನು ಪಶ್ಚಿಮ ಬಂಗಾಳ ಮೂಲದ ಸುಶಾಂತ್ (40) ಎಂದು ಗುರುತಿಸಲಾಗಿದೆ.
ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಮೇಲ್ವಿಚಾರ ಕನಾಗಿ ಕೆಲಸ ಮಾಡುತ್ತಿದ್ದ. ಗುರುವಾರ ಮಧ್ಯಾಹ್ನ ಕೆಎಸ್‌ಆರ್ ರೈಲು ನಿಲ್ದಾಣದ 8ನೇ ಅಂಕಣಕ್ಕೆ ಬಂದಿದ್ದ. ಇದೇ ಸಮಯಕ್ಕೆ ಬೆಂಗಳೂರಿನಿಂದ ಮೈಸೂರು ಕಡೆಗೆ ಒಡೆಯರ್ ಎಕ್ಸ್‌ಪ್ರೆಸ್ ರೈಲು ಹೊರಟ್ಟಿದೆ. ಈ ವೇಳೆ ಏಕಾಏಕಿ ಗೆ ಲಿವತ್ ಓಡಿ ಬಂದಿರುವ ಸುಶಾಂತ್ ಹಳಿಗೆ ಅಡ್ಡಲಾಗಿ ಮಲಗಿದ್ದಾನೆ. ಈ ವೇಳೆ ರೈಲು ಚಕ್ರ ಆತನ ಕುತ್ತಿಗೆ ಮೇಲೆ ಹರಿದ ಪರಿಣಾಮ ರುಂಡ ಮತ್ತು ಮುಂಡ ಬೇರ್ಪಟ್ಟು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗುರುವಾರ ಮಧ್ಯಾಹ್ನ ಸುಮಾರು 3.20ಕ್ಕೆ ಕೆಎಸ್‌ಆರ್ ರೈಲು ನಿಲ್ದಾಣದ 8ನೇ ಅಂಕಣ ದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪಶ್ಚಿಮ ಬಂಗಾಳದಲ್ಲಿರುವ ಮೃತನ ಕುಟುಂಬಕ್ಕೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಷಯ ತಿಳಿದು ಕೆಎಸ್‌ಆರ್ ರೈಲು ನಿಲ್ದಾಣದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪಶ್ಚಿಮ ಬಂಗಾಳದಿಂದ ಮೃತನ ಕುಟುಂಬದವರು ನಗರದಕ್ಕೆ ಬಂದ ಬಳಿಕ ಮರಣೋತ್ತರ ಪರೀಕ್ಷೆ ಮಾಡಿಸಿ, ಮೃತದೇಹ ಹಸ್ತಾಂತರಿಸಲಾಗುವುದು. ಈ ಸಂಬಂಧ ಕೆಎಸ್‌ಆರ್ ರೈಲು ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.