ತುಮಕೂರು : ರಾಜ್ಯದಲ್ಲಿ ನಿರಂತರವಾಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆಗಳು ನಡೆಯುತ್ತಿವೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲಿ ಸುಗ್ರೀವಾಜ್ಞೆ ಜಾರಿಗೆ ತರುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಆದರೂ ಸಹ ಆತ್ಮಹತ್ಯೆ ಪ್ರಕರಣಗಳು ನಿಲ್ಲುತ್ತಿಲ್ಲ ಇದೀಗ ಕೈ ಸಾಲದಿಂದ ಹೆದರಿ ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ ಹೊಸಳ್ಳಿ ಗ್ರಾಮದ ಕೆರೆಯಲ್ಲಿ ಪಾಂಡುರಂಗಯ್ಯ (38) ಮೃತದೇಹ ಪತ್ತೆಯಾಗಿದೆ.ಶನಿವಾರ ಸಂಬಂಧಿಕರ ಮನೆಗೆ ಹೋಗುವುದಾಗಿ ಪಾಂಡುರಂಗಯ್ಯ ಹೆಂಡತಿಗೆ ಹೇಳಿ ಮನೆ ಬಿಟ್ಟಿದ್ದ. ಮೇಲ್ನೋಟಕ್ಕೆ ಕೈಸಲ ಹೆಚ್ಚಾಗಿ ಕೆರೆಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ. ಸದ್ಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗುಬ್ಬಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.