ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು ಬಳಿಕ ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡಿತು. ಆದರೂ ಕೂಡ ರಾಜ್ಯದಲ್ಲಿ ಈ ಒಂದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಆತ್ಮಹತ್ಯೆಗಳು ನಿಲ್ಲುತ್ತಿಲ್ಲ. ಈಗ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿ ಒಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ ಜಾಲಹಳ್ಳಿಯ ಮಂಜುನಾಥ್ (34) ನೇಣಿಗೆ ಶರಣಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಜಾಲಹಳ್ಳಿಯಲ್ಲಿ ಮಂಜುನಾಥ್ ಅವರು ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಎಲ್ & ಟಿ ಫೈನಾನ್ಸ್ ಸೇರಿದಂತೆ ಐದಾರು ಕಡೆಗೆ ಮಂಜುನಾಥ್ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ಆಗದೆ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಮಂಜುನಾಥ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿ ಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.