ಬೀದರ್ : ವೇಗವಾಗಿ ಚಲಿಸುತ್ತಿದ್ದಂತಹ ಕಾರು ಒಂದು ನಿಯಂತ್ರಣ ಕಳೆದುಕೊಂಡು ಪಲ್ಟಿ ಆಗಿದ್ದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮಶಿವಕುಮಾರ್ ಪೊಲೀಸ್ ಪಾಟೀಲ್ (47) ಎನ್ನುವ ವ್ಯಕ್ತಿ ಸ್ಥಳದಲ್ಲಿ ಸಾವನಪ್ಪಿದ್ದಾರೆ.ಮೃತರು ಔರಾದ್ ತಾಲೂಕಿನ ಧೂಪತ್ ಮಹಾಗಾಂವ್ ಗ್ರಾಮದವರಾದ ವ್ಯಕ್ತಿ ಸಂತಪೂರ್ ಕಡೆಯಿಂದ ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ ಕಾರು ಪಲ್ಟಿಯಾಗಿದೆ.ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.