ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ತನ್ನಿಂದ ದೂರವಿದ್ದ ಪತ್ನಿಯ ಮೇಲೆ ಕೋಪಗೊಂಡ ಪತಿಯೋರ್ವ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಮಾಳಪ್ಪನಹಟ್ಟಿಯಲ್ಲಿ ಗುರುವಾರ ನಡೆದಿದೆ.
ಮೊಹಮ್ಮದ್ ಸುಹೇಲ್ (44) ಎಂಬಾತನೇ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಆರೋಪಿ. ಘಟನೆಯಲ್ಲಿ, ಆತನ ಪತ್ನಿ ತಾಸಿನಾಬಾನು, ಮಗಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಇವರಿಬ್ಬರೂ ಕಳೆದ 8 ತಿಂಗಳುಗಳಿಂದ ದೂರವಾಗಿ ವಾಸವಿದ್ದರು.
ಸುಹೇಲ್ ಹಾಗೂ ಪತ್ನಿ ತಾಸಿನಾ ಬಾನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ಸುಹೇಲ್ ನೀಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ತಾಸಿನಾ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರು ನಗರ ಸೇರಿದ್ದಳು. ಇದೀಗ ತಾಸಿನಾ ಹಬ್ಬಕ್ಕೆಂದು ಸಹೋದರಿ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ಬಂದು ಆ್ಯಸಿಡ್ ದಾಳಿ ನಡೆಸಿದ್ದಾನೆ. ಬಳಿಕ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ.

ಮಾಳಪ್ಪನಹಟ್ಟಿಯ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಅವರು, ಆಟೋ ಚಾಲಕನಾಗಿರುವ ಸುಹೇಲ್ ಭಾಷಾನಿಂದ ಆ್ಯಸಿಡ್ ದಾಳಿ ನಡೆಸಿದ್ದಾನೆ. ಸದ್ಯ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಆರೋಪಿ ಬಂಧನಕ್ಕೆ ತಂಡ ರಚಿಸಿದ್ದೇವೆ. ಬಂಧನದ ಬಳಿಕ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.